ಜಿಲ್ಲಾ

ಕಲಬುರ್ಗಿಯಲ್ಲಿ ಕೊರೊನಾ ಆರ್ಭಟದ ಜತೆಗೆ ವರುಣನ ಅಬ್ಬರ..!

ಕಲಬುರ್ಗಿ- ಕಲಬುರ್ಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಮಹಾಮಾರಿಯ ಅಬ್ಬರ ಕಡಿಮೆಯಾಗುತ್ತಿಲ್ಲ. ಜಿಲ್ಲೆಯಲ್ಲಿ ಇಂದು ಒಂದೇ ದಿನ ಸೋಂಕಿನಿಂದ 5 ಜನ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
ಕಲಬುರ್ಗಿ ಜಿಲ್ಲೆಯಲ್ಲಿ ಇಂದು 82 ಹೊಸ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2674ಕ್ಕೆ ಹೆಚ್ಚಳವಾಗಿದೆ. ಇಂದು ಆಸ್ಪತ್ರೆಯಿಂದ 124 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ 940 ಆಕ್ಟಿವ್ ಕೇಸ್ ಸದ್ಯ ಇವೆ.
ಕಲಬುರ್ಗಿ ನಗರ ಸೇರಿ ಜಿಲ್ಲೆಯಲ್ಲಿ ಇಂದು ಧಾರಾಕಾರ ಮಳೆಯಾಗಿದೆ. ಅನೇಕ ಕಡೆಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಮಳೆ ನೀರಿನಲ್ಲಿ ಸಂಚಾರ ನಡೆಸಲು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಕೊರೊನಾ ವೈರಸ್ ಹಾವಳಿಯಿಂದ ಜಿಲ್ಲೆಯ ಜನ ತತ್ತರಿಸಿದ್ದು ಮಳೆಯಿಂದ ಸಾಂಕ್ರಾಮಿಕ ರೋಗ ಹೆಚ್ಚಾಗುವ ಭೀತಿ ಎದುರಾಗಿದೆ.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!