400ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕನ್ನಡದ ಖ್ಯಾತ ಪೋಷಕ ನಟಿ ಇನ್ನಿಲ್ಲ

ಮೈಸೂರು- 400ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಡೆಸಿ ಎಲ್ಲರ ಮೆಚ್ಚುಗೆ ಕಳಿಸಿದ್ದ ಖ್ಯಾತ ಪೋಷಕ ನಟಿ ಶಾಂತಮ್ಮ(94) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಂತಮ್ಮ ಮೈಸೂರಿನ ಮಗಳ ಮನೆಯಲ್ಲಿ ಕೆಲ ವರ್ಷಗಳಿಂದ ನೆಲೆಸಿದ್ದರು. ನಿನ್ನೆ ಸಂಜೆ ಮನೆಯಲ್ಲಿ ಕುಸಿದು ಬಿದ್ದಿದ್ದ ಶಾಂತಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೊರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಶಾಂತಮ್ಮ ಅವರನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದರು. ನಂತರ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತು. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಇಂದು ಸಂಜೆ ಮೃತಪಟ್ಟಿದ್ದಾರೆ.
ಕನ್ನಡ, ಹಿಂದಿ, ತಮಿಳು ಸೇರಿದಂತೆ ಶಾಂತಮ್ಮ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹೆಚ್ಚಿದ್ದಾರೆ. ಅತ್ಯಂತ ಮುಗ್ಧ ನಟನೆಗೆ ಇವರು ಹೆಸರುವಾಸಿಯಾಗಿದ್ದರು. ಕನ್ನಡ ಪ್ರಖ್ಯಾತ ನಟ ಜತೆಗೆ ನಟಿಸಿ ಹೆಸರುವಾಸಿಯಾಗಿದ್ದರು. ಮೃತ ಶಾಂತಮ್ಮ ಗಂಟಲು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿಗಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ.