ಕೊರೊನಾ ಸೋಂಕಿತನ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ- ಬಿಮ್ಸ್ ಆಸ್ಪತ್ರೆಯ ಆ್ಯಂಬುಲೆನ್ಸ್ ಬೆಂಕಿ!

ಬೆಳಗಾವಿ- ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಇಂದು ಉದ್ರಿಕ್ಗರ ಗುಂಪು ನುಗ್ಗಿ ಆ್ಯಂಬುಲೆನ್ಸ್ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬೆಳಗಾವಿಯ ಮೂಲದ 50 ವರ್ಷದ ವ್ಯಕ್ತಿಯೊಬ್ಬರು ಇದೇ ತಿಂಗಳ 19ರಂದು ಆಸ್ಪತ್ರೆಗೆ ದಾಖಲಾಗಿದ್ರು. ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಇಂದು ಐಸಿಯುಗೆ ಶಿಫ್ಟ್ ಮಾಡಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಈ ವಿಚಾರ ತಿಳಿದ ಮೃತನ ಕಡೆಯುವರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದರಲ್ಲಿ ಕೆಲ ಉದ್ರಿಕ್ತರು ಬಿಮ್ಸ್ ಮುಂಭಾಗದಲ್ಲಿ ನಿಲ್ಲಿಸಿದ್ದ ಆ್ಯಂಬುಲೆನ್ಸ್ ಬೆಂಕಿ ಹಚ್ಚಿದ್ದು, ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆಸ್ಪತ್ರೆಗೆ ನುಗ್ಗಲು ಯತ್ನಿಸಿದ್ದು, ಇದು ಸಾಧ್ಯವಾಗಿಲ್ಲ.
ಘಟನೆ ಮಾಹಿತಿ ಪಡೆದ ಬೆಳಗಾವಿ ಜಿಲ್ಲಾಧಿಕಾರಿ ಎಂ, ಜಿ ಹಿರೇಮಠ, ನಗರ ಪೊಲೀಸ್ ಆಯುಕ್ತ ತ್ಯಾಗರಾಜನ್ ಸ್ಥಳಕ್ಕೆ ಭೇಟಿ ನೀಡಿದ್ರು. ಆ್ಯಂಬುಲೆನ್ಸ್ ಚಾಲಕನ ಮಾಹಿತಿ ಆಧಾರದ ಮೇಲೆ ಎಪಿಎಂಸಿ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಲು ನಿರ್ಧರಿಸಲಾಗಿದೆ. ತಕ್ಷಣವೇ ಆರೋಪಿಗಳನ್ನು ಬಂಧಿಸಲು ಸೂಚನೆ ನೀಡಿದ್ದಾರೆ.
ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ವೈದ್ಯರ ನಿರ್ಲಕ್ಷ್ಯದಿಂದ ರೋಗಿಗಳ ಸಾವು ಪ್ರಕರಣ ಹೆಚ್ಚಾಗಿದ್ದವು. ಈ ಬಗ್ಗೆ ಸಂಬಂಧ ಪಟ್ಟವರು ಸರಿಯಾಗಿ ಗಮನಿಸಿಲ್ಲ. ಇನ್ನೂ ಉದ್ರಿಕ್ತರು ನಡೆಸಿದ ದಾಳಿ ಹಿನ್ನೆಲೆಯಲ್ಲಿ ಆಸ್ಪತ್ರೆಯ ರೋಗಿಗಳು, ವೈದ್ಯರು ಗಾಬರಿಯಾಗಿದ್ದು, ಹಿರಿಯ ಅಧಿಕಾರಿಗಳು ಧೈರ್ಯ ತುಂಬುವ ಯತ್ನ ಮಾಡಿದ್ದಾರೆ.