ಸಿಎಂ, ವಿಪಕ್ಷ ನಾಯಕರಿಗೆ ಕೊರೊನಾ ಸೋಂಕು- ಒಂದೇ ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ

ಬೆಂಗಳೂರು- ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ಕೊರೊನಾ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಹ ಕೊರೊನಾ ಸೋಂಕು ಇರೋದು ದೃಢಪಟ್ಟಿದ್ದು, ಅವರು ಅದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರಿಗು ಒಂದೇ ಆಸ್ಪತ್ರೆಯಲ್ಲಿ ವೈದ್ಯರು ಇದೀಗ ಚಿಕಿತ್ಸೆ ನೀಡುತ್ತಿದ್ದಾರೆ.
ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ಧರಾಮಯ್ಯ ಇಬ್ಬರಿಗೂ ಸೋಂಕಿನ ಲಕ್ಷಣಗಳು ಇಲ್ಲ. ಬದಲಾಗಿ ಮುಂಜಾಗೃತಾ ಕ್ರಮವಾಗಿ ವೈದ್ಯರು ನಿಗಾ ವಹಿಸಿದ್ದಾರೆ. ಸಿಎಂಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಠಾನದಲ್ಲಿ ಕೆಲಸ ಮಾಡುತ್ತಿದ್ದ ಅನೇಕ ಸಿಬ್ಬಂಧಿಗೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜತೆಗೆ ಸಿಎಂ ಸಂಪರ್ಕದಲ್ಲಿ ಇದ್ದ ಅನೇಕ ಸಚಿವರು ಈಗಾಗಲೇ ಹೋಂ ಕ್ವಾರಂಟೈನ್ ಆಗಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಸಂಪರ್ಕದಲ್ಲಿ ಇದ್ದನ ಅನೇಕ ಕಾಂಗ್ರೆಸ್ ನಾಯಕರಿಗೆ ಭಯ ಆರಂಭವಾಗಿದೆ. ಎಲ್ಲರೂ ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು ಸ್ವತಃ ಸಿದ್ದರಾಮಯ್ಯ ಟ್ವೀಟರ್ ಮೂಲಕ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ಪುತ್ರ ಯತೀಂದ್ರ ಹಾಗೂ ಪತ್ನಿ ಸೇರಿ ಪ್ರಾರ್ಥಮಿಕ ಸಂಪರ್ಕದಲ್ಲಿ ಇದ್ದ ಹಲವರು ಪರೀಕ್ಷೆಗೆ ಒಳಗಾಗೋ ಸಾಧ್ಯತೆ ಇದೆ.