ಕರ್ನಾಟಕ

ಉದ್ಯೋಗ ಸೃಷ್ಟಿ ಸರಕಾರದ ಗುರಿ: ಸಿಎಂ ಬಿ.ಎಸ್.ವೈ

ಬೆಂಗಳೂರು: 74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದ್ವಜಾರೋಹಣ ಮಾಡುವುದರ ಮೂಲಕ ಸರಳವಾಗಿ ಸಂಭ್ರಮದಿಂದ ಆಚರಣೆ ಮಾಡಲಾಯಿತು

ಬಳಿಕ ಕಾರ್ಯಕ್ರಮದಲ್ಲಿ ರಾಜ್ಯವನ್ನುದ್ದೇಶಿಸಿ ಮಾತನಾಡಿದರು. ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಸರಕಾರವು ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ , ಕೊರೋನಾ ಕಂಟಕದ ಈ ಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿಯ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿ ರಾಜಧರ್ಮ ಪಾಲನೆಗೆ ನಾವು ಬದ್ದರಾಗಿದ್ದೇವೆ ಎಂದರು.

ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಂತೆ ರಾಜ್ಯಾದ್ಯಂತ ಉದ್ಯೋಗವಾಕಾಶಗಳನ್ನು ಸೃಷ್ಟಿಸುವತ್ತ ಹೊಸ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಗರದಿಂದ ಗ್ರಾಮೀಣ ಪ್ರದೇಶಕ್ಕೆ ಮರಳುವವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕಲ್ಪಿಸಲು ಸರ್ಕಾರ ಯೋಜನೆಗಳನ್ನು ರೂಪಿಸಿದೆ ಎಂದರು.

ಮಳೆ, ಪ್ರವಾಹ ಮತ್ತು ಸಾಂಕ್ರಾಮಿಕ ಪಿಡುಗು ದೊಡ್ಡ ಸವಾಲುಗಳನ್ನು ತಂದೊಡ್ಡಿದೆ. ಆರ್ಥಿಕ ಹಿಂಜರಿಕೆ, ಉದ್ಯೋಗ ಕಡಿತ ಹಾಗೂ ಬೊಕ್ಕಸಕ್ಕೆ ರಾಜಸ್ವ ನಷ್ಟ, ಸ್ಥಬ್ಧವಾದ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳಿಂದಾಗಿ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು ಮಾತ್ರವಲ್ಲದೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ಆಸ್ಪತ್ರೆಗಳು, ಫಿವರ್ ಕ್ಲಿನಿಕ್‌ಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದರು.

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ 1.31 ಕೋಟಿಗಿಂತಲೂ ಹೆಚ್ಚು ಜನರಿಗೆ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಹಾಗೂ 1694 ಕೋಟಿ ರೂ ವೆಚ್ಚದಲ್ಲಿ ಈವರೆಗೆ 8.5 ಲಕ್ಷ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಸರಕಾರದ ಸಾಧನೆಯ ಪಥವನ್ನು ವಿವರಿಸಿದರು.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!