ಕ್ರೈಂ
ಪ್ರೇಮಿಗಳಿಬ್ಬರು ತುಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ..

ಶಿವಮೊಗ್ಗ :- ಜಿಲ್ಲೆಯ ಭದ್ರಾವತಿ ತಾಲೂಕಿನ ಹುರುಳಿಹಳ್ಳಿ ಗ್ರಾಮದ ಸಂತೋಷ (22) ಹಾಗೂ ಕಾಕಬ ಹಸೂಡಿ ಗ್ರಾಮದ ಅನುಷ (19) ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳಾಗಿದ್ದಾರೆ.
ಕಳೆದ 2-3 ವರ್ಷಗಳಿಂದ ಪ್ರೀತಿಸುತ್ತಿದ್ದ ಇವರ ಪ್ರೀತಿಗೆ ಮನೆಯವರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮನನೊಂದು ನದಿಗೆ ಹಾರಿದ್ದಾರೆ.
ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ತುಂಗಾ ನದಿ ಸೇತುವೆಯ ಬಳಿ ಘಟನೆ ನೆಡೆದಿದೆ. ಸ್ಥಳೀಯರ ಸಹಾಯದಿಂದ ಯುವತಿಯನ್ನು ರಕ್ಷಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮೃತಪಟ್ಟಿದ್ದಾಳೆ. ಇನ್ನೂ ಯುವಕನಿಗಾಗಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯನಿರತವಾಗಿದ್ದಾರೆ. ಸ್ಥಳಕ್ಕೆ ತುಂಗಾನಗರ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ..