ಕ್ರೈಂದೇಶ & ವಿದೇಶ

ಅಪ್ರಾಪ್ತೆ ಮೇಲೆ ವಿಕೃತ ಮೇರೆದ ರಾಕ್ಷಸರು, ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ, ಅತ್ಯಾಚಾರ..

ಲಕ್ನೋ :- ಉತ್ತರ ಪ್ರದೇಶದ ಲಖೀಂಪುರದ ಪಟ್ಟಣದ ಹೊರ ವಲಯದಲ್ಲಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು, ನಾಲಗೆ ಕತ್ತರಿಸಿ ವಿಕೃತವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕಬ್ಬಿನ ಗದ್ದೆಯಲ್ಲಿ ಯಾರೂ ನೋಡಲಾರದ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.


ಈ ಭೀಕರ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಬಾಲಕಿ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಳು. ಪೋಷಕರು ಬಾಲಕಿಗಾಗಿ ಎಲ್ಲಡೆ ಹುಡುಕಾಟ ನಡೆಸಿದ್ದಾರೆ. ಆದರೆ ಶನಿವಾರ ಆಕೆಯ ಮೃತದೇಹ ಊರಾಚೆಗಿನ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು.

ಮೃತ ದೇಹ ನೋಡಿದ ಪೋಷಕರು ಒಂದು ಕ್ಷಣ ಬೆಚ್ಚಿ ಬಿದ್ದಿದ್ದಾರೆ. ಬಾಲಕಿಯ ಕಣ್ಣು ಕಿತ್ತು, ನಾಲಿಗೆ ಕತ್ತಿರಿಸಿ ದುಪ್ಪಟದಿಂದ ಕತ್ತು ಬಿಗಿದು ಕೊಲೆಗೈಯ್ಯಲಾಗಿತ್ತು.
ಉತ್ತರ ಪ್ರದೇಶದಲ್ಲಿ ಘಟನೆ ಭಾರಿ ಸುದ್ದಿ ಮಾಡುತ್ತಿದ್ದು, ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕೆಂದು ಆಗ್ರಹ ಕೇಳಿ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೋಲಿಸರು ಇಬ್ಬರನ್ನು ಬಂಧಿಸಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!