ದೇಶ & ವಿದೇಶ
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು.

ದೆಹಲಿ- ಕೇಂದ್ರ ಗೃಹ ಸಚಿವ ಅಮಿತ್ ಆರೋಗ್ಯದಲ್ಲಿ ಏರುಪೇರು ಆಗಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ದಿನಗಳ ಹಿಂದೆ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಗುಣಮುಖರಾಗಿ ಮತ್ತೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಮತ್ತೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.