ಭಾರತೀಯ ಸಿನಿ ಪ್ರಿಯರಿಗೊಂದು ಸಿಹಿ ಸುದ್ದಿ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಸಂಪೂರ್ಣ ಚೇತರಿಕೆ ಕಂಡಿದೆ.

ಕೊರೊನಾ ಸೋಂಕಿಗೆ ಒಳಗಾಗಿ ಎರಡು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಬಿ. ಬಾಲಸುಬ್ರಹ್ಮಣ್ಯಂರ ವರದಿ ನೆಗೆಟಿವ್ ಬಂದಿದೆ.
ಆಗಸ್ಟ್ 5ರಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಭಾನುವಾರ ಸಂಜೆ ಬಂದ ಕೊರೊನಾ ವರದಿಯಲ್ಲಿ ನೆಗೆಟಿವ್ ಬಂದಿದೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ತುರ್ತು ಚಿಕಿತ್ಸಾ ಘಟಕದಲ್ಲಿ ವೆಂಟಿಲೇಟರ್ ಅಳವಡಿಸಲಾಗಿತ್ತು.
ದೇಹದ ಎಲ್ಲಾ ಅಂಗಾಂಗಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ಶ್ವಾಸಕೋಶದಲ್ಲಿ ಸಮಸ್ಯೆ ಮುಂದುವರಿದಿತ್ತು. ಅದರಲ್ಲೂ ಎರಡು ದಿನಗಳ ಹಿಂದೆ ಶ್ವಾಸಕೋಶದಲ್ಲಿ ರಕ್ತಸ್ರಾವ ಉಂಟಾಗಿದ್ದು ಆತಂಕ ಸೃಷ್ಟಿಸಿತ್ತು.
ಎರಡು ದಿನಗಳ ಹಿಂದೆ ಕೊರೊನಾ ಸೋಂಕಿನಿಂದ ಪತ್ನಿ ಸಾವಿತ್ರಿ ಬಿಡುಗಡೆ ಆಗಿದ್ದು, ಇದರ ಬೆನ್ನಲ್ಲೇ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೂ ಕೊರೊನಾ ನೆಗೆಟಿವ್ ಬಂದಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.