ದೇಶ & ವಿದೇಶ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ- ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಬಗ್ಗೆ ನವದೆಯಲಿಯ ಸೇನಾಸ್ಪತ್ರೆಯ ಪ್ರಕಟಣೆ ಹೊರಡಿಸಿದ್ದು, ಕೋಮಾ ಸ್ಥಿತಿಯಲ್ಲಿಯೇ ಪ್ರಣಬ್ ಇದ್ದಾರೆ. ಅವರಿಗೆ ವೆಂಟಿಲೆಟರ್ ನೆರವಿನೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

84 ವರ್ಷ ವಯಸ್ಸಿನ ಪ್ರಣಬ್ ಮುಖರ್ಜಿ ಅನಾರೋಗ್ಯ ಹಿನ್ನೆಲೆಯಲ್ಲಿ ಆಗಷ್ಟ್ 10ರಂದು ದೆಯಲಿಯ ಸೇನಾಸ್ಪತ್ರೆಗೆ ದಾಖಲಾಗಿದ್ದರು. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣಕ್ಕೆ ತುರ್ತು ಆಪರೇಷನ್ ಮಾಡಲಾಗಿತ್ತು. ನಂತರವು ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ಸುಧಾರಣೆ ಕಂಡು ಬಂದಿಲ್ಲ.

ಆಸ್ಪತ್ರೆಗೆ ದಾಖಲಾಗಿದ್ದ ಪ್ರಣಬ್ ಮುಖರ್ಜಿಗೆ ಅವರಿಗೆ ಕೊರೊನಾ ಸೋಂಕು ಇರೋದು ದೃಢ ಪಟ್ಟಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ. ಸದ್ಯ ವೆಂಟಿಲೆಟರ್ ಸಹಾಯದಿಂದಲೇ ಪ್ರಣಬ್ ಮುಖರ್ಜಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!