ಜಿಲ್ಲಾ
ಶಾಸಕಿ ಶಶಿಕಲಾ ಜೊಲ್ಲೆಗೆ ಕೊರೊನಾ ಪಾಸಿಟಿವ್ ದೃಢ..

ಬೆಳಗಾವಿ :-ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿ ಕ್ವಾರಂಟೇನಲ್ಲಿ ಇರಲಿದ್ದಾರೆ.
ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು ಕೊವೀಡ್ ಪರೀಕ್ಷೆ ಮಾಡಿಕೊಂಡು ಕ್ವಾರೆಂಟೈನ್ ಆಗಬೇಕಾಗಿ ತಮ್ಮ ಫೇಸ್ ಬುಕ್ ಹಾಗೂ ಟ್ವೀಟರ್ ಖಾತೆ ಮೂಲಕ ವಿನಂತಿಸಿಕೊಂಡಿದ್ದಾರೆ. ಸದ್ಯಕ್ಕೆ ನನ್ನ ಆರೋಗ್ಯ ಪರಸ್ಥಿತಿ ಸಾಮಾನ್ಯವಾಗಿದ್ದು ನಿಮ್ಮೆಲ್ಲರ ಪ್ರೀತಿ ಹಾರೈಕೆಗಳೊಂದಿಗೆ ಮತ್ತೆ ಜನಸೇವೆನೆ ಮರಳುತ್ತೇನೆ ಎಂದು ತಿಳಿಸಿದ್ದಾರೆ.