ಕರ್ನಾಟಕ

ಗಂಡ-ಹೆಂಡತಿ ಚಿತ್ರ ನಟಿ ಸಂಜನಾ ಗಲ್ರಾಣಿಯನ್ನು ವಶಕ್ಕೆ ಪಡೆದ ಸಿಸಿಬಿ ಪೋಲಿಸರು…

ಬೆಂಗಳೂರು: ಮಾದಕ ಜಾಲಕ್ಕೆ ಸ್ಯಾಂಡಲ್​ವುಡ್​ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಜನಾ ಆಪ್ತ ರಾಹುಲ್ ಹೇಳಿಕೆ‌ ಆಧಾರದ ಮೇಲೆ ದಾಳಿ ಮಾಡಲಾಗಿತ್ತು.

ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್​ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ಮಾಡಿ, ಮನೆಯನ್ನು ಪರಿಶೀಲಿಸಿದೆ. ಪರಿಶೀಲನೆ ನಂತರ ಸಿಸಿಬಿ ಅಧಿಕಾರಿಗಳು ನಟಿ ಸಂಜನಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅವರ ಪೋನ್ ಕೂಡ ಸೀಜ್ ಮಾಡಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!