
ಬೆಳಗಾವಿ :- ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರಿಗೆ ಕರೋನಾ ಸೋಂಕು ತಗುಲಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಬಗ್ಗೆ ಸ್ವತಃ ಕೇಂದ್ರ ಸಚಿವರೇ ಟ್ವೀಟ್ ಮಾಡಿದ್ದು ನಾನು ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು ಯಾರೂ ಕೂಡ ಆತಂಕ ಪಡಬೇಕಾಗಿಲ್ಲ ಶೀಘ್ರವಾಗಿ ಗುಣಮುಖರಾಗಿ ಬರುತ್ತೇನೆ ಎಂದು ತಿಳಿಸಿದ್ದಾರೆ. ಸಂಸದರು ದೆಹಲಿಗೆ ಪ್ರಯಾಣಿಸುತ್ತಿದ್ದಂತೆ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ನಾನು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ.
ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ