ಕರ್ನಾಟಕ

ಬಿ ಎಸ್ ಯಡಿಯೂರಪ್ಪ, ಎಚ್ ಡಿ ಕುಮಾರಸ್ವಾಮಿ ಸ್ವಾಮಿ ಭೇಟಿ- ಕುತೂಹಲ ಕೆರಳಿಸಿದ ಇಬ್ಬರ ನಡೆ!

ಬೆಂಗಳೂರು- ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನ ನಂತರ ಬಿಜೆಪಿ ಸರ್ಕಾರ ರಚನೆಯಾಗಿರೋದು ಹಳೆಯ‌ ವಿಚಾರ. ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣವಾದ ಬಿಜೆಪಿ ವಿರುದ್ಧ ಎಚ್ ಡಿ ಅನೇಕ ಸಹ ವಾಗ್ದಾಳಿ ನಡೆಸಿದ್ದಾರೆ. ಆದರೇ ಇಂದು ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಎಚ್ ಡಿ ಕುಮಾರಸ್ವಾಮಿ ಭೇಟಿಯಾಗಿದ್ದು,‌ ಕುತೂಹಲ ಮೂಡಿಸಿದೆ.

ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಜಗದೀಶ್ ಶೆಟ್ಟರ್ ಕೇಂದ್ರದ ಅನೇಕ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ರಾಜನಾಥ್ ಸಿಂಗ್ ಸೇರಿ ಅನೇಕ ನಾಯಕರ ಜತೆಗೆ ಚರ್ಚೆ ನಡೆಸಿದ್ದಾರೆ. ಇತ್ತ ಎಚ್ ಡಿ ಕೆ ಹಾಗೂ ಬಿ ಎಸ್ ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದು ಮಹತ್ವವನ್ನು ಪಡೆದುಕೊಂಡಿದೆ.

ರಾಜ್ಯದಲ್ಲಿ ಮತ್ತೆ ನಾಯಕತ್ವದ ಬದಲಾವಣೆ ವಿಚಾರ ಮುನ್ನೆಲೆಗೆ ಬಂತಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಸಿಎಂ ಭೇಟಿ ಬಳಿಕ ಮಾತನಾಡಿದ ಮಾಜಿ ಸಿಎಂ ಎಚ್ ಡಿ ಕೆ, ಎರಡು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಮಳೆ ಹಾನಿಗೆ ಶೀಘ್ರದಲ್ಲೇ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಸಿಎಂಗೆ ಒತ್ತಾಯ ಮಾಡಿರೋದಾಗಿ ಹೇಳಿದರು.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!