ಕರ್ನಾಟಕ

ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದ ಸರ್ಕಾರ. ಎಲ್ಲಾ ನೇರ ನೇಮಕಾತಿ ಭರ್ತಿಗೆ ಬ್ರೇಕ್!

ಬೆಂಗಳೂರು : ರಾಜ್ಯ ಸರಕಾರ ಉದ್ಯೋಗ ಆಕ್ಷಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಕಾರ ಆರ್ಥಿಕ ವೆಚ್ಚದಲ್ಲಿ ಮಿತವ್ಯಯ ಪಾಲಿಸುವ ಉದ್ದೇಶದಿಂದ ಸರಕಾರ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಪಕ್ರಿಯೆಯನ್ನು ತಡೆಹಿಡಿಯಲಾಗಿದೆ‌.

ಈ‌‌ ಕುರಿತಾಗಿ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿರುವ ಆರ್ಥಿಕ ಇಲಾಖೆಯ ವಿಶೇಷಾಧಿಕಾರಿ ಮುರಳೀಧರ.ಸಿ ಕೊರೊನಾ ಸಂಕಷ್ಟದಿಂದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ.

ಅನುಕಂಪದ ಆಧಾರದ ನೇಮಕಾತಿಯನ್ನು 2020-2021 ನೇ ಸಾಲಿನ ಅರ್ಜಿಗಳನ್ನು ಸ್ವೀಕರಿಸಲು ಆರ್ಥಿಕ ಇಲಾಖೆಯು ಸಹಮತಿಸಿದ್ದು, ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಮುಂದಿನ ಆರ್ಥಿಕ ವರ್ಷದಲ್ಲಿ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!