ಸಪ್ಟೆಂಬರ್ 21ರಿಂದ ಶಾಲಾ-ಕಾಲೇಜು ಪ್ರಾರಂಭ: ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ.

ಬೆಂಗಳೂರು : ಕೊರೊನಾ ಆತಂಕದ ನಡುವೆಯೂ ಸೆ. 21 ರಿಂದ ಶಾಲಾ-ಕಾಲೇಜುಗಳ ಆರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಅನುಮತಿ ಮೇಲೆ ಶಾಲಾ-ಕಾಲೇಜು ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿದೆ.
21ರಿಂದ ದೇಶಾದ್ಯಂತ 9 ರಿಂದ 12ನೇ ತರಗತಿ ಶಾಲಾ-ಕಾಲೇಜು ಆರಂಭಕ್ಕೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮೂಲಕ ಸೆಪ್ಟೆಂಬರ್ 21ರಿಂದ ದೇಶಾದ್ಯಂತ 9ರಿಂದ 12ನೇ ತರಗತಿ ಶಾಲೆಗಳು ಆರಂಭವಾಗಲಿವೆ ಎನ್ನಲಾಗುತ್ತಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಇದರ ಅನ್ವಯ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಳ್ಳಲೇಬೇಕು.
ಶಾಲೆಗೆ ಬರುವ ಮಕ್ಕಳಿಗೆ ಯಾವುದೇ ಒತ್ತಾಯವಿಲ್ಲ ಸ್ವಯಂ ಪ್ರೇರಿತವಾಗಿ ಮತ್ತು ಪಾಲಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಲೇಬೇಕು. ಸಾಮಾಜಿಕ ಅಂತರದಲ್ಲಿ ಆಸನದ ವ್ಯವಸ್ಥೆ ಮಾಡಬೇಕು. ಕಡ್ಡಾಯವಾಗಿ ಪೇಸ್ ಮಾಸ್ಕ, ಆರೋಗ್ಯ ತಪಾಸಣೆ, ಅಷ್ಟೇ ಅಲ್ಲದೇ ಆನ್ ಲೈನ್ ತರಗತಿಯ ಮುಂದುವರಿಕೆಯ ಬಗ್ಗೆಯೂ ಸೂಚನೆ ಕೇಂದ್ರ ಸರಕಾರ ನೀಡಿದೆ. ಕಂಟೈನ್ಮೆಂಟ್ ಝೋನ್ ನಲ್ಲಿರುವ ಶಾಲೆಗಳು, ವಿದ್ಯಾರ್ಥಿಗಳು ಶಾಲೆಗೆ ಹಾಜರಾಗದಂತೆ ಸೂಚನೆ ನೀಡಿದೆ.