ಜಿಲ್ಲಾ

23 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್, ಕಾರಣವಾಯಿತೇ ವಿದ್ಯಾಗಮ ಯೋಜನೆ?

ಬೆಳಗಾವಿ/ರಾಮದುರ್ಗ :- ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಎಂ‌.ತಿಮ್ಮಾಪುರ ಗ್ರಾಮದಲ್ಲಿ 23 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪಾಸಿಟಿವ್ ಕಂಡುಬಂದಿರುವ ವಿಚಾರವಾಗಿ ಸ್ಥಳೀಯ ಜನರು ಭಯಭೀತರಾಗಿದ್ದಾರೆ.


ಶಿಕ್ಷಕರು ಗ್ರಾಮಕ್ಕೆ ತೆರಳಿ ಪಾಠ ಮಾಡುವುದು ವಿದ್ಯಾಗಮ ಯೋಜನೆಯ ಗುರಿಯಾಗಿದ್ದು, ಈ ಸಂದರ್ಭದಲ್ಲಿ 23 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದ 68 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡುವ ಭೀತಿ ಎದುರಾಗಿದೆ.


ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಂ‌.ತಿಮ್ಮಾಪುರ ಗ್ರಾಮದಲ್ಲಿ ಓದುತ್ತಿದ್ದ 191 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ಅವರ ಪ್ರಾಥಮಿಕ ಸಂಪರ್ಕ ವ್ಯಾಪ್ತಿಗೆ 168 ವಿದ್ಯಾರ್ಥಿಗಳು ಬಂದಿದ್ದಾರೆ ಎನ್ನಲಾಗಿದೆ. ಇದರಿಂದ ಎಂ.ತಿಮ್ಮಾಪುರ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಅದೇ ರೀತಿ ಈ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದ 6 ಜನ ಶಿಕ್ಷಕರಿಗೂ ಕೊರೊನಾ ಸೋಂಕು ತಗುಲುವ ಸಂಭವವಿದೆ.

Show More

Related Articles

Leave a Reply

Your email address will not be published. Required fields are marked *

Back to top button
error: Content is protected !!