ಕೊಲಂಬೋ: ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಭಾರತ (Team India) ಹಾಗೂ ಪಾಕ್ ಸೂಪರ್ ಫೋರ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಇದರ ನಡುವೆ ಮಳೆ ತರಿಸಿ ಅಲ್ಲಾ ಕಾಪಾಡಿದ್ದಾನೆ ಎಂದು ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ (Shoaib Akhtar) ಹೇಳಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ.
ಅಖ್ತರ್ ತಮ್ಮ ನೇರ ನುಡಿಗಳಿಂದ ಹೆಸರುವಾಸಿಯಾಗಿದ್ದಾರೆ. ಈ ಪಂದ್ಯ ನಡೆಯುವಾಗ ಅವರು ಟ್ವಿಟ್ಟರ್‌ನಲ್ಲಿ (ಎಕ್ಸ್‌ನಲ್ಲಿ) ಪಾಕ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ವಿಚಾರವಾಗಿ ಇದೊಂದು ಮೂರ್ಖತನದ ನಿರ್ಧಾರ ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಪಂದ್ಯದ ವೇಳೆ ಮಳೆ ಬಂದು ನಮ್ಮ ತಂಡವನ್ನು ಕಾಪಾಡಿದೆ ಎಂದು ಹೇಳಿಕೊಂಡಿದ್ದಾರೆ.