ಹಾವೇರಿ: ಹೊಲದಲ್ಲಿ ಕೆಲಸ ಮಾಡುವ ವೇಳೆ ಮಹಿಳೆಗೆ ವಿಷಕಾರಿ ಹಾವು ಕಚ್ಚಿ ಸಾವು ಮಹಿಳೆಯೊರ್ವಳು ಮೃತ ಪಟ್ಟ ಘಟನೆ ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ನೀಲವ್ವ ಸಣ್ಣಮನಿ (60) ಎಂದು ಗುರುತಿಸಲಾಗಿದೆ.ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿದ್ದಾಳೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಿಂಗಾಪುರ ಗ್ರಾಮದಲ್ಲಿ ನಡೆದ ಘಟನೆ ನಡೆದಿದ್ದು,
ಆಡೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.