
ಹಾವೇರಿ: ಅನೈತಿಕ ಸಂಬಂಧದ ಆರೋಪದ ಹಿನ್ನಲೆಯಲ್ಲಿ ಓರ್ವನನ್ನು ಅಮಾನವೀಯ ರೀತಿಯಲ್ಲಿ ಹತ್ಯೆ ಮಾಡಿರುವ ಘಟನೆ ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಪ್ರಕಾಶ ಓಲೇಕಾರ(45) ಎಂಬ ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಜೀವಂತ ದಹಿಸುವ ಯತ್ನವು ನಡೆದಿದ್ದು, ತೀವೃಗಾಯಗಳಿಂದ ನರಳುತ್ತಿದ್ದ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದ್ದಾನೆ.ಈ ಬಗ್ಗೆ ಮೃತನ ಸಹೋದರ ಫಕ್ಕೀರೇಶ ಹಾನಗಲ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೊಪ್ಪರಸಿಕೊಪ್ಪದ ಕೆಲವು ಆರೋಪಿತರು ಅಕ್ರಮ ಸಂಬಂಧ ಹೊಂದಿರುವುದಾಗಿ ನನ್ನ ತಮ್ಮ ಪ್ರಕಾಶನನ್ನು ಅವಾಚ್ಯವಾಗಿ ಶಬ್ದಗಳಿಂದ ನಿಂದಿಸಿದ್ದಾರೆ. ಮೃತ ಪ್ರಕಾಶ ಆರೋಪಿತರಿಗೆ ಈ ರೀತಿಯಾಗಿ ಆರೋಪ ಮಾಡುವುದು ಸರಿಯಲ್ಲ, ನಾನು ಅವಳೊಂದಿಗೆ ಅನೈತಿಕ ಸಂಬಂಧ ಹೊಂದಿಲ್ಲ ಎಂದರು, ಆರೋಪಿತರು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ಮಾಡಿದ್ದು ಕೊರಳಿಗೆ ಚಪ್ಪಲಿ ಹಾರ, ಕಾಲಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಜಯಾ ಎಂಬುವವರಿಗೂ ಕೂಡಾ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಯಲ್ಲಿ ಪ್ರಕರಣ ದಾಖಲಾಗಿದ್ದು. ಪ್ರಕರಣಕ್ಕೆ ಸಂಬಂಧಿಸಿದಂತೆ 7. ಜನ ಆರೋಪಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ತಿಳಿಸಿದ್ದಾರೆ.