ಮರದಡಿ ಸಿಲುಕಿದ ಸಿಬ್ಬಂದಿಗಳು
ಹಿರೇಕೆರೂರು: ಹಾವೇರಿಯಲ್ಲಿ ವರುಣನ ಆರ್ಭಟ ಜನ ತತ್ತರಿಸಿ ಹೋಗಿದ್ದಾರೆ. ಬೈಕ್ ಸವಾರರ ಮೇಲೆ ಬೃಹತ್ ಮರವೊಂದು ಬಿದ್ದು,ಇಬ್ಬರ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ.
ಹಿರೇಕೆರೂರಿನಲ್ಲಿ ಹೆಸ್ಕಾಂನಲ್ಲಿ ಹೊರಗುತ್ತಿಗೆ ನೌಕರರಾಗಿದ್ದ ಮೃತರನ್ನು ಚಿನ್ನಮುಳುಗುಂದ ಗ್ರಾಮದ ನಿವಾಸಿ ಮಂಜುನಾಥ (35)ಯತ್ತಿನಹಳ್ಳಿ ಗ್ರಾಮದ ಹನುಮಂತಪ್ಪ (25) ಗುರುತಿಸಲಾಗಿದೆ. ಮಧ್ಯಾಹ್ನದ ಊಟ ಮುಗಿಸಿ ಮರಳಿ ಹೆಸ್ಕಾಂ ಕಚೇರಿಗೆ ತೆರಳುವಾಗ ನಡೆದ ಘಟನೆ ನಡೆದಿದೆ.
ಬೈಕ್ ನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಇಬ್ಬರ ಮೃತ ಪಟ್ಟಿದ್ದಾರೆ.ಸ್ಥಳಕ್ಕೆ ಹಿರೇಕೆರೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.