ಕರ್ನಾಟಕ ರಾಜ್ಯೋತ್ಸವ: ಮೈಸೂರು ರಾಜ್ಯ ಕರ್ನಾಟಕವಾಗಿದ್ದು ಹೇಗೆ ಗೊತ್ತಾ?
ಬೆಂಗಳೂರು: ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956 ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ.
ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾಯರು, ಕರ್ನಾಟಕ ಏಕೀಕರಣ ಚಳುವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು. 1950ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.
1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.
ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು “ಮೈಸೂರು” ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ 1, 1973 ರಂದು “ಕರ್ನಾಟಕ” ಎಂದು ಬದಲಾಯಿತು.
ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.