ಹಾವೇರಿ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನೆರೆ ವೀಕ್ಷಣೆ ಮಾಡಿದರು.ಜಿಲ್ಲೆಯ ಕುಣಿಮೆಳ್ಳಹಳ್ಳಿ, ನಾಗನೂರು,ಸಂಗೂರು,ಕೂಡಲ ಬಾಳಂಬೀಡ ಗ್ರಾಮಗಳ, ಪ್ರವಾಹ ಪೀಡಿತ ಪ್ರದೇಶ ವೀಕ್ಷಣೆ ಮಾಡಿ,ಬಳಿಕ ಅಕ್ಕಿ ಆಲೂರಿನ ಕೆರೆಗೆ ಬಾಗಿನ ಅರ್ಪಣೆ ಮಾಡಿದರು. ಸಚಿವರಿಗೆ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ,ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ, ಜಿಲ್ಲಾಧಿಕಾರಿ ವಿಜಯ್ ಮಹಾತೇಶ,ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಾಥ್ ನೀಡಿದರು.