ಹಾನಗಲ್ : ಶಾಸಕ ಶ್ರೀನಿವಾಸ ಮಾನೆ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಮೂಲಕ ಮಳಗಿಯಲ್ಲಿರುವ ಧರ್ಮಾ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಲಿದ್ದಾರೆ.
ಉತ್ತಮ ಮಳೆಯಿಂದ ಭರ್ತಿಯಾಗಿ ಕೋಡಿ ಬಿದ್ದಿರುವ ಹಾನಗಲ್ ತಾಲೂಕಿನ ಜೀವನಾಡಿ ಮಳಗಿ ಧರ್ಮಾ ಜಲಾಶಯಕ್ಕೆ ಶಾಸಕ ಶ್ರೀನಿವಾಸ ಮಾನೆ ಅವರು ವಿಶೇಷ ಪೂಜೆ ಸಲ್ಲಿಸಿ, ಬಾಗಿನ ಸಲ್ಲಿಸಲಿದ್ದಾರೆ.
ಅಂದು ಬೆಳಗ್ಗೆ 9.ಗಂಟೆಗೆ ಮಂತಗಿ ಗ್ರಾಮದಿಂದ ಬೃಹತ್ ಪಾದಯಾತ್ರೆ ಮೂಲಕ ಜಲಾಶಯದವರೆಗೆ ತೆರಳಲಾಗುವುದು. ತಾವೆಲ್ಲರೂ ಆಗಮಿಸಿ, ಯಶಸ್ವಿಗೊಳಿಸಬೇಕೆಂದು ಹಾನಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಅಕ್ಕಿ ಆಲೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ ಅವರು ತಿಳಿಸಿದ್ದಾರೆ.