HassanLatestNationalPoliticsState

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಡಿ.ವಿ.ಸದಾನಂದಗೌಡ

ಹಾಸನ: ಬಿಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ಹೇಳಿದ್ದಾರೆ. ಪ್ರಸ್ತುತ ಅವರು ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಇತ್ತೀಚೆಗೆ ವದಂತಿಗಳು ಹಬ್ಬಿದ್ದವು. ಆ ವಿಚಾರವಾಗಿ ಅಸಮಾಧಾನಗೊಂಡಿದ್ದ ಅವರು, ಪಕ್ಷದ ವರಿಷ್ಠರು ತಮ್ಮ ನಿಲುವು ತಿಳಿಸಬೇಕು ಎಂದು ಆಗ್ರಹಿಸಿದ್ದರು.

ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷಗಳ ಕಾಲ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಮತ್ತು ನರೇಂದ್ರ ಮೋದಿ ಸರ್ಕಾರದಲ್ಲಿ ಏಳು ವರ್ಷ ಸಂಪುಟ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಹೆಚ್ಚು ಆಸೆಪಟ್ಟರೆ, ಜನ ನನ್ನನ್ನು ಸ್ವಾರ್ಥಿ ಎಂದು ಕರೆಯುತ್ತಾರೆ’ ಎಂದು ಗೌಡರು ಹೇಳಿದರು.

2021ರಲ್ಲಿ ಕೇಂದ್ರ ಸಚಿವರ ಪುನಾರಚನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆದೇಶದ ಮೇರೆಗೆ ಅವರು ಕೇಂದ್ರ ಸಚಿವ ಸ್ಥಾನ ತ್ಯಜಿಸಿದ್ದರು.

ಇನ್ನು, ಎನ್‌ಡಿಎ ವಿಚಾರಕ್ಕೆ ಬಂದರೆ ನಮ್ಮ ಕೇಂದ್ರ ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ಆದರೆ, ನಮ್ಮ ಕಾರ್ಯಕರ್ತರು ಇಷ್ಟು ವರ್ಷ ಹೋರಾಡಿದ ಪಕ್ಷದೊಂದಿಗೆ ಏಕಾಏಕಿ ಚುನಾವಣೆಗೆ ಸ್ಪರ್ಧಿಸುವುದು ಕಷ್ಟವಾಗುವುದರಿಂದ ರಾಜ್ಯದಲ್ಲಿ ಇದನ್ನು ಜಾರಿಗೆ ತರಲು ಸೂಕ್ತ ಮಾರ್ಗಸೂಚಿಗಳನ್ನು ನೀಡುವಂತೆ ನಾವು ಅವರಿಗೆ ಮನವಿ ಮಾಡಿದ್ದೇವೆ ಎಂದು ಗೌಡ ಹೇಳಿದರು.

Related Articles

Leave a Reply

Your email address will not be published. Required fields are marked *

Back to top button
Social media & sharing icons powered by UltimatelySocial