
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿರುವ ಮಾಲತೇಶ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಭಗವಂತನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದೇವಸ್ಥಾನಕ್ಕೆ ನಿಗದಿತ ಸಮಯಕ್ಕಿಂದ 3 ಗಂಟೆ ತಡವಾಗಿ ಆಗಮಿಸಿದ ಸಿಎಂ ಅವರು ಮಾಲತೇಶ ಸ್ವಾಮಿ ಬಳಿ ತಮಗೆ ಎದುರಾಗಿರುವ ಸಂಕಷ್ಟಕ್ಕೆ ಪರಿಹಾರ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.ಮುಡಾ ಹಗರಣದಲ್ಲಿ ಸಿಎಂ ಅವರನ್ನ ಸಿಕ್ಕಿ ಹಾಕಿಸುವಂತ ಕೆಲಸಕ್ಕೆ ಮುಂದಾಗಿರುವ ಹಿನ್ನೆಲೆ ದುಷ್ಟ ಶಕ್ತಿಗಳ ಕುತಂತ್ರ ನಾಶವಾಗಲಿ ಎಂದು ಪ್ರಾರ್ಥಿಸಿದರು.

ಈ ಸಮಯದಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್, ಉಪಸಭಾಪತಿಗಳಾದ ರುದ್ರಪ್ಪ ಮಾ.ಲಮಾಣಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಶಾಸಕರಾದ ಶ್ರೀನಿವಾಸ್ ಮಾನೆ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮಾಜಿ ಸಚಿವ ಶಂಕರ್, ನೆಹರೂ ಓಲೆಕಾರ್, ಗುಡ್ಡದಾಪುರ ಗ್ರಾ.ಪಂ.ಅಧ್ಯಕ್ಷರಾದ ದ್ಯಾಮವ್ವ ಮೈ ಸತಗಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.