
ಹಾವೇರಿ: ಹಾವೇರಿಯ ಶಿವಶಕ್ತಿ ಪ್ಯಾಲೇಸ್ ನಲ್ಲಿ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಹಾವೇರಿ ಹಾಗೂ ಭಾರತೀಯ ಜನತಾ ಪಾರ್ಟಿ ಹಾವೇರಿ ಇವರ ವತಿಯಿಂದ ಏರ್ಪಡಿಸಿದ ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿರವರು ಉದ್ಘಾಟಿಸಿ, ಪುಸ್ತಕ ಬಿಡುಗಡೆಗೊಳಿಸಿದರು.
ಈ ಸಂಧರ್ಭದಲ್ಲಿ ಲೋಕಸಭಾ ಸದಸ್ಯ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ.ಸಿ.ಪಾಟೀಲ್, ಮಾಜಿ ಶಾಸಕರಾದ ಪಿ ರಾಜೀವ,ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನ, ಲೀಡಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್.ಮಾಳಗಿ, ಭಾರತೀಯ ಜನತಾ ಪಕ್ಷದ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣವರ, ಭೋಜರಾಜ ಕರೂದಿ, ಶೋಭಾ ನಿಸ್ಸಿಮಗೌಡ್ರ ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಚಂದ್ರಪ್ಪ ಹರಿಜನ ಸೇರಿದಂತೆ ಪ್ರಮುಖರು ಹಾಜರಿದ್ದರು.