ಹಾವೇರಿ: ರಾಜ್ಯದಲ್ಲಿ ನಡೆಯುವ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೆ ಗೆಲ್ಲುತ್ತೇ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಶಿಗ್ಗಾವಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬೂತ್ ಪದಾಧಿಕಾರಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸಮಾವೇಶ ಇದು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಮತಗಳಿಂದ ಗೆಲ್ಲುತ್ತೆ.ಶಿಗ್ಗಾವಿ ಕ್ಷೇತ್ರದಲ್ಲಿ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಗೆದ್ದಿಲ್ಲ, ಈಗ ವಾತಾವರಣ ಬದಲಾಗಿದೆ.ರಾಜ್ಯದಲ್ಲಿ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೆ ಗೆಲ್ಲುತ್ತದೆ.ಮನೆ ಮನೆಗೆ ಹೋಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿಕೊಂಡ ಬರಬೇಕು.ಪ್ರತಿಯೊಬ್ಬ ಬೂತ್ ಮಟ್ಟದ ಅಧ್ಯಕ್ಷ ಕಾಂಗ್ರೆಸ್ ಪಕ್ಷದ ಸಿದ್ದಾಂತಗಳನ್ನ ಮತದಾರರಿಗೆ ತಿಳಿಸಬೇಕು ಎಂದರು.