Bengaluru CityDakshina KannadaDistrictLatestState
ನವೆಂಬರ್ 7ರ ವರೆಗೆ ರಾಜ್ಯದ ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಕರಾವಳಿಯಲ್ಲಿ ಹಿಂಗಾರು ಮಳೆ ಮುಂದುವರಿದಿದ್ದು, ನವೆಂಬರ್ 7ರವರೆಗೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಸಂಜೆ ಬಳಿಕ ಗುಡುಗು, ಸಿಡಿಲು, ಮಿಂಚು ಸಹಿತ ಸಾಧಾರಣ ಮಳೆ ಸುರಿಯುತ್ತಿದೆ.
ಶುಕ್ರವಾರ ರಾತ್ರಿ ಕೂಡ ದ.ಕ.ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗುಡುಗು, ಮಿಂಚಿನ ಮಳೆಯಾಗಿದೆ. ಅಪರಾಹ್ನ ಮಂಗಳೂರು ಮಾತ್ರವಲ್ಲ ಗ್ರಾಮಾಂತರಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ನವೆಂಬರ್ 5ರಿಂದ ನವೆಂಬರ್ 7ರ ವರೆಗೆ ದ.ಕ.ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆ ನಿರೀಕ್ಷಿಸಲಾಗಿದೆ.