
ಹಾನಗಲ್: ತಾಲೂಕ ಪಂಚಾಯತ ಆವರಣದಲ್ಲಿ ತಾಲೂಕಾ ಗ್ಯಾರಂಟಿ
ಅನುಷ್ಠಾನ ಸಮಿತಿಯ ಕಚೇರಿಯನ್ನು ಶಾಸಕ
ಶ್ರೀನಿವಾಸ ಮಾನೆ ಅವರು ಮಂಗಳವಾರ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀನಿವಾಸ ಮಾನೆ ಅವರ 50 ನೇ ಜನ್ಮದಿನದ ಅಂಗವಾಗಿ
50 ಸರ್ಕಾರಿ ಶಾಲೆಗಳಿಗೆ ತಲಾ 20 ರಂತೆ ಒಟ್ಟು ಒಂದು ಸಾವಿರ ಬಿಸಿಯೂಟದ ಪ್ಲೇಟ್ ವಿತರಿಸಲಾಗುವುದು. ಕಾಂಗ್ರೆಸ್ಪ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ ತಿಳಿಸಿದ್ದಾರೆ. ಉದ್ಘಾಟನೆ ಕಾರ್ಯಕ್ರಮಕ್ಕೆ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಂ ಎಂ ಹಿರೇಮಠ್ ಸೇರಿದಂತೆ ಗ್ಯಾರಂಟಿ ಸಮಿತಿಯ ಸದಸ್ಯರು ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.