ಹಾವೇರಿ : ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ಜುಲೈ 31 ರಂದು ಜಿಲ್ಲೆಯಲ್ಲಿ ಪ್ರವಾಸಕೈಗೊಂಡು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಿಗ್ಗೆ 9-30ಕ್ಕೆ ಹುಬ್ಬಳ್ಳಿಯಿಂದ ಹೊರಟು, 10-30ಕ್ಕೆ ಸವಣೂರ ತಾಲೂಕು ಕುಣಿಮೆಳ್ಳಿಹಳ್ಳಿಗೆ ಆಗಮಿಸಿ ಬೆಳೆಹಾನಿ ಪರಿಶೀಲನೆ ನಡೆಸಲಿದ್ದಾರೆ. 11 ಗಂಟೆಗೆ ವರದಾಹಳ್ಳಿ, 11-30ಕ್ಕೆ ನಾಗನೂರ ಗ್ರಾಮದಲ್ಲಿ ಬೆಳೆಹಾನಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಹಾನಗಲ್ ತಾಲೂಕು ಕೂಡಲ ಗ್ರಾಮಕ್ಕೆ ತೆರಳಿ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ, 12-45ಕ್ಕೆ ಬಾಳಂಬೀಡದಲ್ಲಿ ಬೆಳೆಹಾನಿ ಪರಿಶೀಲನೆ, ಮಧ್ಯಾಹ್ನ 1-15ಕ್ಕೆ ಅಕ್ಕಿಆಲೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆ, ಮನೆಹಾನಿ ಹಾಗೂ ಸರ್ಕಾರಿ ಶಾಲಾ ಹಾನಿ ಪರಿಶೀಲನೆ ನಡೆಸುವರು. ನಂತರ ಕೆರೆಗೆ ಬಾಗಿನ ಅರ್ಪಿಸುವರು.
ಮಧ್ಯಾಹ್ನ 2 ಗಂಟೆಗೆ ಹಾನಗಲ್ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಹಾವೇರಿ ತಾಲೂಕು ಸಂಗೂರ ಗ್ರಾಮಕ್ಕೆ ಆಗಮಿಸಿ ಮನೆಹಾನಿ ಪರಿಶೀಲನೆ ನಡೆಸುವರು. ನಂತರ ಹುಬ್ಬಳ್ಳಿಗೆ ತೆರಳ ವಾಸ್ತವ್ಯ ಮಾಡಲಿದ್ದಾರೆ.ಆಗಸ್ಟ್ 1 ರಂದು ಬೆಳಿಗ್ಗೆ 10 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು, 11 ಗಂಟೆಗೆ ಸವಣೂರಿಗೆ ಆಗಮಿಸಿ ಸವಣೂರು ಕೃಷಿ ಉತ್ಪನ್ನ ಮಾರುಕಟ್ಟೆ ಪರಿವೀಕ್ಷಣೆ ನಡೆಸಲಿದ್ದಾರೆ. ಮಧ್ಯಾಹ್ನ 12-15ಕ್ಕೆ ಸವಣೂರಿನಿಂದ ಹೊರಟು, ಮಧ್ಯಾಹ್ನ 1 ಗಂಟೆಗೆ ಹಾವೇರಿಗೆ ಆಗಮಿಸುವರು. ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.