ChamarajanagarMysuru

ವರುಣಾ: ವಿಧಾನಸಭೆ ಚುನಾವಣೆಯಲ್ಲಿ ಕುಕ್ಕರ್, ಇಸ್ತ್ರಿಪೆಟ್ಟಿಗೆ ವಿತರಣೆ- ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈರಲ್

ಮೈಸೂರು: ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಾ? ಇದೇ ಅಂಶವೇ ಅವರ ಗೆಲುವಿಗೆ ಕಾರಣವಾಯ್ತಾ ಎಂಬ ಪ್ರಶ್ನೆಗೆ ಖುದ್ದ ಸಿಎಂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೌದು ಎನ್ನುವ ಉತ್ತರವನ್ನು ಕೊಟ್ಟು, ಬಾಯಿತಪ್ಪಿ ಚುನಾವಣಾ ಸತ್ಯ ಬಹಿರಂಗಪಡಿಸಿದ್ದಾರೆ.

ವರುಣಾ ಕ್ಷೇತ್ರದ ಚುನಾವಣೆ ವೇಳೆ ಕೊಟ್ಟ ಗಿಫ್ಟ್ ಬಗ್ಗೆ ಬಹಿರಂಗ ಸಭೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಚುನಾವಣೆ ವೇಳೆ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಸಾವಿರಾರು ಜನರಿಗೆ ಕುಕ್ಕರ್, ಐರನ್ ಬಾಕ್ಸ್ ವಿತರಣೆ ಮಾಡಲಾಗಿತ್ತು ಎಂಬ ಸತ್ಯವನ್ನು ಅವರೇ ಒಪ್ಪಿಕೊಂಡಿದ್ದಾರೆ.

ನಂಜನಗೂಡು ತಾಲೂಕು ಮಡಿವಾಳ ಸಮುದಾಯ ಭವನದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ, ಭಾಷಣದ ವೇಳೆ ಚುನಾವಣಾ ಸತ್ಯ ಬಹಿರಂಗಪಡಿಸಿದ್ದು ಚುನಾವಣಾ ಸಮಯದಲ್ಲಿ ವರುಣಾ ಕ್ಷೇತ್ರದ ಮಡಿವಾಳ ಸಮುದಾಯ ಮತದಾರರಿಗೆ ಸಮುದಾಯದ ರಾಜ್ಯಾಧ್ಯಕ್ಷ ನಂಜಪ್ಪ ಕುಕ್ಕರ್, ಐರನ್ ಬಾಕ್ಸ್ ವಿತರಿಸಲು ಸಿದ್ದ ಮಾಡಿಕೊಂಡಿದ್ದರು.

ಕಾರಣಾಂತರಗಳಿಂದ ಎರಡು ಮೂರು ಬಾರಿ ಮುಂದೂಡಲಾಗಿತ್ತು. ನಂತರ ತಂದೆಯವರಿಂದ ದಿನಾಂಕ ಪಡೆದು, ಅವರ ಕೈಯಲ್ಲೇ ಕುಕ್ಕರ್ ಹಾಗೂ ಐರನ್ ಬಾಕ್ಸ್ ಕೊಡಿಸಿದರು ಎಂದಿದ್ದಾರೆ.ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಸಿಎಂ, ತಾವು ಸ್ಪರ್ಧಿಸಿದ ವರುಣ ಕ್ಷೇತ್ರದಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿ‌ದ್ದೇ ಚುನಾವಣೆ ಗೆಲ್ಲಲು ಸಹಕಾರಿ ಆಯ್ತಾ ಎಂದೂ ಚರ್ಚೆಯಾಗುತ್ತಿದೆ. ಮಡಿವಾಳ ಸಮುದಾಯದ ಸಾವಿರಾರು ಮತದಾರರಿಗೆ ಚುನಾವಣೆ ವೇಳೆ ಕುಕ್ಕರ್, ಐರನ್ ಬಾಕ್ಸ್ ಕೊಟ್ಟಿದ್ದರು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.

ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದ್ದು, ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Social media & sharing icons powered by UltimatelySocial