
ಹಾವೇರಿ : ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪ್ರಕಾಶ್ ಜೋಶಿ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸೌಮ್ಯ ಸ್ವಭಾವದ ಜೋಶಿ ಅವರು ಹಾವೇರಿ ಜಿಲ್ಲೆಯ ಸಮಸ್ಯೆಗಳನ್ನು ತಮ್ಮ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆದು ಪರಿಹಾರಕ್ಕೆ ಪ್ರಯತ್ನಿಸಿದ್ದಾರೆ ಎಂದು ಸ್ಮರಿಸಿದ್ದಾರೆ.ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಮೃತರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.