ಬೆಂಗಳೂರು: ಶಕ್ತಿ ಯೋಜನೆಯಿಂದ ತಮಗಾಗುತ್ತಿರುವ ನಷ್ಟಕ್ಕೆ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಬೆಂಗಳೂರಿನಾದ್ಯಂತ (Bengaluru) ಖಾಸಗಿ ಸಾರಿಗೆ (Private Transport) ನೌಕರರು, ರಿಕ್ಷಾ, ಕ್ಯಾಬ್ ಚಾಲರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆ ಮಧ್ಯೆ ಬಂದಿದ್ದ ರ‍್ಯಾಪಿಡೋ ಬೈಕ್ ಸವಾರನಿಗೆ ಪ್ರತಿಭಟನಾ ನಿರತರು ಥಳಿಸಿರುವ ಘಟನೆ ನಡೆದಿದೆ.
ಪ್ರತಿಭಟನಾ ನಿರತರು ಬೈಕ್, ಟ್ಯಾಕ್ಸಿಗಳ ಮೇಲೆ ಕೆಂಗಣ್ಣು ತೋರುತ್ತಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರಯಾಣಿಕನನ್ನು ಕೂರಿಸಿಕೊಂಡು ಸಾಗುತ್ತಿದ್ದ ರ‍್ಯಾಪಿಡೋ ಬೈಕ್ ಸವಾರನನ್ನು ತಡೆದು, ಪ್ರತಿಭಟನಾಕಾರರು ಥಳಿಸಿದ್ದಾರೆ. ಮಾತ್ರವಲ್ಲದೇ ದ್ವಿಚಕ್ರ ವಾಹನ ಸವಾರರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.