ಹಾನಗಲ್: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತದ ಬೆನ್ನಲೇ ಹಾವೇರಿಯಲ್ಲಿ ಮತ್ತೊಂದು ಗುಡ್ಡ ಕುಸಿದಿದೆ.
ಹಾವೇರಿ ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಮ್ಮಸಗಿ ಬಳಿ ಗುಡ್ಡ ಕುಸಿತಗೊಂಡಿದೆ.ರಾಷ್ಟ್ರೀಯ ಹೆದ್ದಾರಿಯ
ಮೇಲೆ ಗುಡ್ಡ ಕುಸಿದು ಬಿದ್ದಿದೆ.ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ.ಹಾವೇರಿಯಿಂದ ಶಿರಸಿ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದೆ.
ಎಕ್ಕುಂಬಿ-ಮೊಳಕಾಲ್ಮುರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಗುಡ್ಡಕುಸಿತಗೊಂಡಿದೆ.
ಮಂದಗತಿಯಲ್ಲಿ ಸಾಗಿರುವ ಹೆದ್ದಾರಿ ಕಾಮಗಾರಿ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯೂ ಮಂದಗತಿಯಲ್ಲಿ ಸಾಗಿದೆ.ಕಳೆದ ಹಲವು ವರ್ಷಗಳಿಂದ ಕಾಮಗಾರಿ ನಡೆಯುತ್ತಿದೆ.ಗುಡ್ಡ ಕುಸಿತದಿಂದ ಕೇಲವು ಹೊತ್ತು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
ಮಣ್ಣು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಆರಂಭಗೊಂಡಿದೆ.ಮತ್ತೊಂದು ದುರಂತ ಸಂಭವಿಸುವ ಮುಂಚೆ ಎಚ್ಚತ್ತುಕೊಂಡು ವೈಜ್ಞಾನಿಕವಾಗಿ ರಸ್ತೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.