ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಕ್ಷೇತ್ರದ ರೈಲ್ವೆ ಯೋಜನೆಯಗಳನ್ನು ಆರಂಭಿಸುವಂತೆ ಮನವಿ ಮಾಡಿದರು.
ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಗದಗ ಹಾಗೂ ಹಾವೇರಿ ಜಿಲ್ಲೆಯ ರೈಲ್ವೆ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ, ರೈಲುಗಳ ನಿಲುಗಡೆ ಹಾಗೂ ಗದಗ ಯಲವಿಗಿ ನೂತನ ರೈಲು ಮಾರ್ಗ ಆರಂಭಿಸುವಂತೆ ಮನವಿ ಮಾಡಿದರು.