
ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರು ಸಲಹೆ ನೀಡಿದರು.

ನಗರದ ಜಿಲ್ಲಾ ಗುರುಭವನದಲ್ಲಿ ಸೋಮವಾರ ನಡೆದ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ಮುಖ್ಯ ಶಿಕ್ಷಕರ ಸಭೆ ಹಾಗೂ ಶಿಕ್ಷಕ ಪರಿಶ್ರಮ ಹಿರಿಮೆಗೆ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಕರಿಗೆ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಸೂಕ್ತ ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ವಿವಿಧ ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.