ನವದೆಹಲಿ: ಲೋಕಸಭೆಯಲ್ಲಿ ಬಹು ನಿರೀಕ್ಷಿತ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಮಂಗಳವಾರ ಮತದಾನದ ಮೂಲಕ ಮಸೂದೆಯನ್ನು ಅಂಗೀಕರಿಸಲಾಗಿದೆ. 454 ಮತಗಳು ಮಸೂದೆಯ ಪರವಾಗಿ ಬಂದರೆ, ಎರಡು ಮತಗಳು ಮಾತ್ರ ಮಸೂದೆಗೆ ವಿರುದ್ಧವಾಗಿ ಬಂದಿವೆ. 2024ರ ಲೋಕಸಭಾ ಚುನಾವಣೆ ನಂತರ ಜನಗಣತಿ ಮತ್ತು ಡಿಲಿಮಿಟೇಶನ್ ನಡೆಯಲಿದ್ದು ಆ ನಂತರ ಮಸೂದೆಯನ್ನು ಜಾರಿ ಮಾಡಲಾಗುವುದು ಎಂದು ಸರ್ಕಾರ ಮಾಹಿತಿ ನೀಡಿದೆ.
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದರು. ಈಗ ಮಸೂದೆಗೆ ವಿರುದ್ಧವಾಗಿ ಮತ ಚಲಾಯಿಸುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.
ಈ 520 ಮುಸ್ಲಿಂ ಸಂಸದರಲ್ಲಿ ಮಹಿಳಾ ಮುಸ್ಲಿಮರ ಸಂಖ್ಯೆ ಬೆರಳೆಣಿಕೆಯಷ್ಟೂ ಇಲ್ಲ. ಹಾಗಾದರೆ ಮಹಿಳೆಯರಿಗೆ ಪ್ರಾತಿನಿಧ್ಯ ಎಲ್ಲಿದೆ. ಈ ಮಸೂದೆಯಲ್ಲಿ ಮುಸ್ಲಿಂ ಮತ್ತು ಒಬಿಸಿ ಮಹಿಳೆಯರಿಗೆ ಯಾವುದೇ ಪ್ರಾತಿನಿಧ್ಯ ಇಲ್ಲ ಎಂದು ಅವರು ಆರೋಪಿಸಿದ್ದಾರೆ.