NationalNewsPoliticsState

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಹಾಳಾಗಿದೆ: ಸಂಚಲನ ಮೂಡಿಸಿದ ಪ್ರಧಾನಿ ಮೋದಿ ಹೇಳಿಕೆ

ಖಂಡ್ವಾ: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಹಾಳಾಗಿದ್ದು, ತಾವು ಎಷ್ಟು ದಿನ ರಾಜ್ಯದ ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಸಿದ್ದರಾಮಯ್ಯ ಅವರಿಗೆ ತಿಳಿಯದಂತಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿರುವ ಹೇಳಿಕೆಯೊಂದು ಭಾರೀ ಸಂಚನ ಮೂಡಿಸಿದೆ.

ಮಧ್ಯಪ್ರದೇಶದ ಖಂಡವಾದಲ್ಲಿ ಭಾನುವಾರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೇವಲ ಆರು ತಿಂಗಳ ಹಿಂದೆ ರಚನೆಯಾದ ಕಾಂಗ್ರೆಸ್ ಸರ್ಕಾರವನ್ನು ನೋಡಿದರೆ ಎಲ್ಲವೂ ಗೊತ್ತಾಗುತ್ತದೆ. ಸಿಎಂ ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸುತ್ತಾರೋ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿಯ ಮುಂದುವರಿಕೆ ಬಗ್ಗೆಯೇ ಗೊಂದಲಗಳು ಎದ್ದಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಅಧಿಕಾರ ಹಿಡಿದಿರುವ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಭಾಗಿಯಾದ್ದರಿಂದ ಕರ್ನಾಟಕವನ್ನು ಅವರು ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಪಕ್ಷ ಎಡವಟ್ಟಿನಿಂದ ಯಾವಾಗೆಲ್ಲಾ ಸರ್ಕಾರ ರಚನೆ ಮಾಡುತ್ತದೋ, ಆಗೆಲ್ಲಾ ಅಧಿಕಾರಕ್ಕೇರಿದ ರಾಜ್ಯವನ್ನು ಲೂಟಿ ಮಾಡಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಪೈಪೋಟಿ ಏರ್ಪಡುತ್ತದೆ. ಅಂತಹ ಸುದ್ದಿ ಇದೀಗ ಕರ್ನಾಟಕದಿಂದ ಬರುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್​ನಲ್ಲಿ ಸಿಎಂ ಅಧಿಕಾರ ಹಂಚಿಕೆ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಇದರ ಮಧ್ಯೆ ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ. ಇವೆಲ್ಲದರ ಮಧ್ಯೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಅಂದರೆ ಜೆಡಿಎಸ್ ಶಾಸಕರು ಬೆಂಬಲ ಕೊಡಲಿದ್ದಾರೆ ಎಂದು ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ಕಾಂಗ್ರೆಸ್​ ಅನ್ನು ಒಡೆಯುವ ಅಸ್ತ್ರ ಪ್ರಯೋಗಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Social media & sharing icons powered by UltimatelySocial