ಸವಣೂರು : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷೆ ಸಂಜೀವಕುಮಾರ ನೀರಲಗಿ ಹಾಗೂ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಸವಣೂರ ಪಟ್ಟಣದ
ಅಡವಿಸ್ವಾಮಿಮಠ ಹಾಗೂ ಕಾರಡಗಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆರ್ಶಿವಾದ ಪಡೆದುಕೊಂಡರು.
ಮೊದಲು ಅಡವಿಸ್ವಾಮಿ ಮಠದ ಕುಮಾರೇಶ್ವರ ಶ್ರೀಗಳನ್ನು ಸನ್ಮಾನಿಸಿ, ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.ಕಾರಡಗಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆರ್ಶಿವಾದ ಪಡೆದುಕೊಂಡು ದೇವಸ್ಥಾನ ಸಮಿತಿಯ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಮಯದಲ್ಲಿ ಸವಣೂರು ತಾಲೂಕಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಂ.ಜೆ.ಮುಲ್ಲಾ, ಶಿಗ್ಗಾವಿ ತಾಲೂಕಿನ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ.ಪಾಟೀಲ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.