ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ ಆಯೋಜಿಸಲಾಗುವುದು ಎಂದು ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಘೋಷಿಸಿದ್ದಾರೆ. ಡಿಸೆಂಬರ್ 10 ರಿಂದ 17 ರವರೆಗೆ ಮೊದಲ ಬಾರಿಗೆ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್ ದೆಹಲಿಯ ವಿವಿಧ ಸ್ಥಳಗಳಲ್ಲಿ ನಡೆಯಲಿದೆ ಎಂದು ಘೋಷಿಸಲು ನಾನು ಹೆಮ್ಮೆಪಡುತ್ತೇನೆ. ಮೂರು ಕ್ರೀಡಾಂಗಣಗಳಲ್ಲಿ (ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ) ಒಟ್ಟು 7 ವಿಭಾಗಗಳಲ್ಲಿ ಕ್ರೀಡೆ ಆಯೋಜಿಸಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಸೇವಾ ಕ್ರೀಡಾ ನಿಯಂತ್ರಣ ಮಂಡಳಿ ಸೇರಿದಂತೆ 32 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 1,350 ಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಚೊಚ್ಚಲ ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್‌ನಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಇದು ಪ್ಯಾರಾ ಅಥ್ಲೆಟಿಕ್ಸ್, ಪ್ಯಾರಾ ಶೂಟಿಂಗ್, ಪ್ಯಾರಾ ಆರ್ಚರಿ ಸೇರಿದಂತೆ ಏಳು ವಿಭಾಗಗಳಲ್ಲಿ ಕ್ರೀಡಾಪಟುಗಳ ಪಾಲ್ಗೊಳ್ಳಲಿದ್ದಾರೆ. ಫುಟ್ಬಾಲ್, ಪ್ಯಾರಾ-ಬ್ಯಾಡ್ಮಿಂಟನ್, ಪ್ಯಾರಾ ಟೇಬಲ್ ಟೆನಿಸ್ ಮತ್ತು ಪ್ಯಾರಾ ವೇಟ್ ಲಿಫ್ಟಿಂಗ್ ಕೂಡ ಇರಲಿದೆ. IG ಸ್ಟೇಡಿಯಂ, ತುಘಲಕಾಬಾದ್‌ನ ಶೂಟಿಂಗ್ ರೇಂಜ್ ಮತ್ತು JLN ಸ್ಟೇಡಿಯಂಗಳಲ್ಲಿ ಕ್ರೀಡೆಗಳು ನಡೆಯಲಿವೆ.