DistrictHaveriLatestUncategorized
ರಾಜಕೀಯ ದುರುದ್ದೇಶದ ನಿರ್ಧಾರ

ಹಾನಗಲ್ : ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು.ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು
ಸ್ಪಷ್ಟವಾಗಿದೆ ಎಂದು ಕರಗುದ್ರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಜಾಕ್ ಮುಲ್ಲಾ ಅವರು ಆರೋಪಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ
ಒತ್ತಡದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.ಬಿಜೆಪಿ-ಜೆಡಿಎಸ್ ನಾಯಕರ ಹಲವು ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್
ಅನುಮತಿ ಕೋರಿ ಸಲ್ಲಿಸಿದ್ದ ಕಡತಗಳು ರಾಜಭವನದಲ್ಲೇ ಧೂಳು ತಿನ್ನುತ್ತಿವೆ. ಸಿದ್ದರಾಮಯ್ಯ ಅವರ ವಿರುದ್ಧ ರಾಜಕೀಯ ಕಾರಣಕ್ಕಾಗಿ ಷಡ್ಯಂತ್ರದ ಭಾಗವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಇದನ್ನು ಮುಖ್ಯ ಮಂತ್ರಿಗಳು ಹಾಗೂ ರಾಜ್ಯ ಸರ್ಕಾರ ಸಮರ್ಥವಾಗಿ ಎದುರಿಸುತ್ತದೆ.ಕಾಂಗ್ರೆಸ್‌ನ ಎಲ್ಲಾ ಶಾಸಕರು, ಸಚಿವರೂ ಮುಖಂಡರು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ಬಿಜೆಪಿ ಷಡ್ಯಂತ್ರಕ್ಕೆ ಹೆದರುವ ಮಾತೇ ಇಲ್ಲ ಎಂದು
ಹೇಳಿದ್ದಾರೆ.