ಸಚಿವ ಶಿವಾನಂದ ಪಾಟೀಲರಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ:
ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ-ಸಡಗರದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಶಿವಾನಂದ ಪಾಟೀಲ್‌ರಿಂದ ಧ್ವಜಾರೋಹಣ ಮಾಡಿದರು.

15 ಕವಾಯತ್ ಪರೇಡ್ ತಂಡಗಳು ಸೇರಿ ವಿವಿಧ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರಿಂದ ಗೌರವ ವಂದನೆ ಸ್ವೀಕರಿಸಿದರು. ಮೀಸಲು ಪೊಲೀಸ್ ಪಡೆ,ನಾಗರಿಕ ಪೊಲೀಸ್ ಪಡೆ,ಹೋಂ ಗಾರ್ಡ್,ಎನ್ ಸಿಸಿ,ಅರಣ್ಯ ಇಲಾಖೆ ಸೇರಿದಂತೆ ಸ್ಕೌಟ್ ಆ್ಯಂಡ್ ಗೈಡ್ಸ್, ಭಾರತ್ ಸೇವಾ ದಳ, ಶಾಲಾ ವಿದ್ಯಾರ್ಥಿಗಳ ತಂಡಗಳಿಂದ ಆಕರ್ಷಕ ಪರೇಡ್‌ಗಳ ವೀಕ್ಷಣೆಯನ್ನು ಸಚಿವರು ಮಾಡಿದರು.

ಬಳಿಕ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆಗಳಿಗೆ ನೃತ್ಯ ಪ್ರದರ್ಶನ ಮಾಡಿದರು.ಸಮಾರಂಭದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್ ಗಾಜೀಗೌಡ್ರ,ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಹಾವೇರಿ ಜಿಲ್ಲಾಧಿಕಾರಿ ವಿಜಯಕುಮಾರ ಮಹಾಂತೇಶ ದಾನಮ್ಮನವರ,ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ,ಜಿಲ್ಲಾ ಪಂಚಾಯತ ಸಿಇಓ ಅಕ್ಷಯ ಶ್ರೀಧರ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು.